ಬೆಳಗಾವಿ, ಡಿ. 13 (DaijiworldNews/HR): ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡನೆ ಮಾಡುತ್ತೇವೆ. ರಾಜ್ಯದಲ್ಲಿ ಬಲವಂತದ ಮತಾಂತರ ತಡೆಯಬೇಕಾಗಿದೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತಿದ್ದೇವೆ" ಎಂದರು.
ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಮತಾಂತರ ನಿಷೇಧ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.
ಇಂದಿನಿಂದ ಕೊರೊನಾ, ಓಮಿಕ್ರಾನ್ ಭೀತಿಯ ನಡುವೆಯೇ ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.