ಬೆಳಗಾವಿ,ಡಿ. 13 (DaijiworldNews/HR): ಕಾಂಗ್ರೆಸ್ ನಾಯಕರು ಖಾನಾಪುರ ಅಭಿವೃದ್ಧಿಗಾಗಿ ಆಗ್ರಹಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಭಜನಾ ತಂಡದ ಜೊತೆ ಸುವರ್ಣಸೌಧದತ್ತ ಆಗಮಿಸಿದ್ದಾರೆ.
ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕಿ ಅಂಜಲಿ, "ನಾವು ಸರ್ಕಾರದ ಕಣ್ಣು, ಕಿವಿ ತೆರೆಯಲು ಭಜನೆ ಮಾಡುತ್ತಿದ್ದೇವೆ. ಸರ್ಕಾರ ಯಾರ ಪರವಿದೆ ಎಂಬುದನ್ನು ಸ್ಪಷ್ಟಪಡಿಸಲಿ. ಬೆಳೆಹಾನಿಗೆ ಪರಿಹಾರ ಸಿಕ್ಕಿಲ್ಲ. ಖಾನಾಪುರ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ. ಮೊದಲು ಪರಿಹಾರಗಳನ್ನು ರಾಜ್ಯ ಸರ್ಕಾರ ನೀಡಬೇಕು" ಎಂದು ಒತ್ತಾಯಿಸಿದ್ದಾರೆ.
ಇನ್ನು ಇಂದಿನಿಂದ ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶ ಆರಂಭವಾಗುತ್ತಿದ್ದು, ಪಾದಯಾತ್ರೆ ಮೂಲಕ ಅಭಿವೃದ್ಧಿಗೆ ಆಗ್ರಹಿಸಿ ಸರ್ಕಾರದ ಗಮನ ಸೆಳೆಯುತ್ತಿದ್ದೇವೆ ಎಂದರು.
ಪಾದಯಾತ್ರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಖಾನಾಪುರ ಜನತೆ ಭಾಗವಹಿಸಿದ್ದರು.