ಬೆಳಗಾವಿ, ಡಿ. 13 (DaijiworldNews/HR): ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಈ ಪ್ರಶಸ್ತಿ ಪ್ರಧಾನಕ್ಕೆ ಶೀಘ್ರವೇ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನದ ಸಂದರ್ಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ಮಾತನಾಡಿದ ಅವರು, ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಿದ್ದು, ಈ ಪ್ರಶಸ್ತಿ ನೀಡೋದಕ್ಕೆ ಶೀಘ್ರವೇ ದಿನಾಂಕ ನಿಗದಿ ಪಡಿಸಿ, ಘೋಷಿಸಲಾಗುತ್ತದೆ ಎಂದರು.
ಇನ್ನು ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಪ್ರಶಸ್ತಿ ಅಷ್ಟೇ ಅಲ್ಲ, ಪದ್ಮಶ್ರೀ ಪ್ರಶಸ್ತಿಯನ್ನು ನೀಡುವಂತೆ ರಾಜ್ಯ ಸರ್ಕಾರ ಹಾಗೂ ಅವರ ಅಭಿಮಾನಿಗಳು, ಕರುನಾಡಿನ ಕೋರಿಕೆಯಾಗಿದೆ, ಹಾಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಲಿದೆ. ಪದ್ಮಶ್ರೀ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.