ಶ್ರೀನಗರ, ಡಿ. 13 (DaijiworldNews/HR): ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿಡಾಗಿರುವ ಘಟನೆ ಜಮ್ಮು-ಕಾಶ್ಮೀರದ ರಂಗ್ರೆತ್ ಪ್ರದೇಶದಲ್ಲಿ ನಡೆದಿದೆ.
ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ರಂಗ್ರೆತ್ ಪ್ರದೇಶದಲ್ಲಿ ಶೋಧಕಾರ್ಯ ನಡೆಸಿದ್ದು, ಕಾರ್ಯಾಚರಣೆ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದು, ಇದಕ್ಕೆ ಭದ್ರತಾ ಪಡೆಗಳಿಂದ ಪ್ರತಿದಾಳಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ ಉಗ್ರನನ್ನು ಕೊಂದ ನಂತರ ಈ ಕಾರ್ಯಾಚರಣೆ ನಡೆದಿದೆ.