ಮಧ್ಯಪ್ರದೇಶ, ಡಿ.13 (DaijiworldNews/PY): ನೆರೆಮನೆಯ ವ್ಯಕ್ತಿಯೋರ್ವ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರೇವಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.
ಈ ಸಂಬಂಧ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.
"ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆಮಿಷ ತೋರಿಸಿ ತನ್ನ ಮನೆಗೆ ಕರೆದುಕೊಂಡು ಬಂದ ಆರೋಪಿ, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಗೆ ಅಳುತ್ತಾ ಬಂದ ಬಾಲಕಿಯನ್ನು ಕಂಡ ಪೋಷಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ" ಎಂದು ಪೊಲೀಸ್ ಇನ್ಸ್ಪೆಕ್ಟರ್ ದಿಲೀಪ್ ದಹಿಯಾ ಹೇಳಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ಬಂಧಿಸಿದ್ಧಾರೆ. ಆರೋಪಿ ವಿರುದ್ದ ಐಪಿಸಿ ಸೆಕ್ಷನ್ ಅಡಿಯಲ್ಲಿ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ ಎಂದು ಆಸ್ಪತ್ರೆಯ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಡಾ. ಅತುಲ್ ಸಿಂಗ್ ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ಧಾರೆ.