ಶ್ರೀನಗರ, ಡಿ.13 (DaijiworldNews/SM): ಜಮ್ಮು-ಕಾಶ್ಮೀರದ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿಗಳು ತೆರಳುತ್ತಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ. 12 ಮಂದಿಗೆ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಪೊಲೀಸರು ಇದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪಂಥಾ ಚೌಕ್ ಬಳಿಯ ಝೆವಾನ್ ನಲ್ಲಿ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದಾಕ್ಷಣ ಭದ್ರತಾ ಸಿಬ್ಬಂದಿಗಳು ಅಲರ್ಟ್ ಆಗಿದ್ದಾರೆ. ಘಟನಾ ಪ್ರದೇಶವನ್ನು ಸುತ್ತುವರೆದಿದ್ದಾರೆ. ಉಗ್ರರರ ಪತ್ತೆ ಕಾರ್ಯ ಮುಂದುವರೆದಿದೆ.