ಹಾಸನ, ಡಿ.14 (DaijiworldNews/PY): ವಿಧಾನ ಪರಿಷತ್ ಚುನಾವಣೆಯಲ್ಲಿ ಸೂರಜ್ ರೇವಣ್ಣ ಅವರು ಗೆಲುವು ಸಾಧಿಸಿದ್ದು, ಮೂಲಕ ಅವರು ವಿಧಾನಸೌಧ ಪ್ರವೇಶಿಸಲಿದ್ದಾರೆ.
ಸೂರಜ್ ರೇವಣ್ಣ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರು ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ ಶಂಕರ್ ಅವರ ವಿರುದ್ದ 1,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ಧಾರೆ.
ಮತ ಎಣಿಕೆಯ ಆರಂಭದಿಂದ ಕೊನೆಯವರೆಗೂ ಎಲ್ಲಾ ಟೇಬಲ್ಗಳಲ್ಲೂ ಸೂರಜ್ ರೇವಣ್ಣ ಮುನ್ನಡೆ ಕಾಯ್ದುಕೊಂಡು ಬಂದರು. ಕೊನೆಯಲ್ಲಿ 1433 ಮತಗಳ ಅಂತರದಿಂದ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.