ಮಂಗಳೂರು, ಡಿ 14 (DaijiworldNews/MS): 12 ಮಂದಿ ರಾಜ್ಯಸಭಾ ಸಂಸದರ ಅಮಾನತು ವಿರುದ್ಧದ ಪ್ರತಿಭಟನೆ ಅಂಗವಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡಿಸೆಂಬರ್ 14, ಮಂಗಳವಾರ, ಟ್ವೀಟ್ ಮಾಡಿ "ಸರ್ಕಾರಕ್ಕೆ ಪ್ರಜಾಪ್ರಭುತ್ವದ ಬಗ್ಗೆ "ಪಾಠ (ಟ್ಯೂಷನ್) ಅಗತ್ಯವಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯದ ಮಹತ್ವದ ಕುರಿತು ಮೋದಿ ಸರ್ಕಾರಕ್ಕೆ ಟ್ಯೂಷನ್ ಅಗತ್ಯವಿದೆ ಎಂದು ಅವರು ಹೇಳಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ನವೆಂಬರ್ 29 ರಂದು ಹನ್ನೆರಡು ಪ್ರತಿಪಕ್ಷದ ರಾಜ್ಯಸಭಾ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಭಾಗಗಳಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಯಿತು.
ಮಂಗಳವಾರ, ರಾಜ್ಯಸಭೆ ಮತ್ತು ಲೋಕಸಭೆಯ ಸಂಸದರು ಸಂಸತ್ತಿನ ಗಾಂಧಿ ಪ್ರತಿಮೆಯಿಂದ ವಿಜಯ್ ಚೌಕ್ಗೆ ಮಧ್ಯಾಹ್ನ 12:30 ಕ್ಕೆ ಮೆರವಣಿಗೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಲಿದ್ದಾರೆ.