ಬೆಳಗಾವಿ, ಡಿ 14 (DaijiworldNews/MS): ಬೆಳಗಾವಿಯಲ್ಲಿ ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೆಳಗಾವಿಯ ಪರಿಷತ್ ಕದನದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ಉಂಟಾಗಿತ್ತು. ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಕೂಡ ಗೆಲ್ಲುವುದು ಖಚಿತವಾಗಿದೆ. ಎರಡನೇ ಪ್ರಾಶಸ್ತ್ಯದ ಮತ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರಿಗೆ ದೊರೆತಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಮಹಂತೇಶ್ ಕವಟಗಿಮಠಗೆ ಭಾರೀ ಮುಖಭಂಗವಾಗಿದೆ.