ಬೆಳಗಾವಿ,ಡಿ. 14 (DaijiworldNews/HR): ಈ ವರ್ಷ ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧಾನಪರಿಷತ್ಗೆ ತಿಳಿಸಿದ್ದಾರೆ.
ಈ ಕುರಿತು ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, "ರಾಜ್ಯದಲ್ಲಿ ಈ ವರ್ಷ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುವುದು. ಅವುಗಳಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು" ಎಂದು ಆಶ್ವಾಸನೆ ನೀಡಿದ್ದಾರೆ.
ಇನ್ನು ಕೆಲವು ಕಡೆ ಠಾಣೆಗಳನ್ನು ಲಕ್ಷಾಂತರ ರೂ. ಖರ್ಚು ಮಾಡಿ ದುರಸ್ತಿ ಮಾಡಿದರೂ ಯಾವುದೇ ಉಪಯೋಗವಾಗುತ್ತಿಲ್ಲ. ಹೀಗಾಗಿ ಆಧುನಿಕ ಸೌಲಭ್ಯವುಳ್ಳ ಕಟ್ಟಡಗಳನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಪೊಲೀಸರು ಕಟ್ಟಡಗಳು ಮತ್ತು ಅವರು ವಾಸ ಮಾಡುವ ಕ್ವಾಟ್ರರ್ಸ್ಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ನಾವು ಸರಿ ಇಲ್ಲದಿದ್ದರೆ ವ್ಯವಸ್ಥೆಗಳು ಕೂಡ ಸರಿ ಇರುವುದಿಲ್ಲ. ಮೊದಲು ಇದನ್ನು ಸರಿಪಡಿಸಿ ಎಂದು ಸಲಹೆ ನೀಡಿದ್ದಾರೆ.