ನವದೆಹಲಿ ಡಿ 14 (DaijiworldNews/MS): ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಬಿಡುಗಡೆ ಮಾಡಲು ಯೋಜಿಸಿದೆ ಎಂದು ಕಂಪನಿಯ ಸಿಇಒ ಆದಾರ್ ಪೂನಾವಾಲಾ ಮಂಗಳವಾರ ತಿಳಿಸಿದ್ದಾರೆ.
ಮಂಗಳವಾರ ಉದ್ಯಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಪೂನಾವಾಲಾ, 'ಕೊವೊವ್ಯಾಕ್ಸ್' ಲಸಿಕೆ ಪ್ರಯೋಗ ಹಂತದಲ್ಲಿದ್ದು ಮೂರು ವರ್ಷದ ಮೇಲಿನ ಮಕ್ಕಳಿಗೆ ರಕ್ಷಣೆ ನೀಡುತ್ತದೆ ಎಂದು ಹೇಳಿದರು.
ಪ್ರಸ್ತುತ, ಕೋವಿಶೀಲ್ಡ್ ಮತ್ತು ಇತರ COVID ಲಸಿಕೆಗಳನ್ನು 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಅನುಮೋದಿಸಲಾಗಿದೆ.
"ನಾವು ಮಕ್ಕಳಲ್ಲಿ ಸಾಕಷ್ಟು ತೀವ್ರವಾದ ಸೋಂಕು ನೋಡಿಲ್ಲ . ಅದೃಷ್ಟವಶಾತ್, ಮಕ್ಕಳಿಗೆ ಕೊವೀಡ್ ನ ಭಯವಿಲ್ಲ. ಅದರೂ ನಾವು ಆರು ತಿಂಗಳಲ್ಲಿ ಮಕ್ಕಳಿಗೆ ಲಸಿಕೆಯನ್ನು ಪ್ರಾರಂಭಿಸುತ್ತೇವೆ, ಈ ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸಾಬೀತಾಗಿದೆ ನಿಮ್ಮ ಮಕ್ಕಳಿಗೆ ಲಸಿಕೆ ಹಾಕಲು ನೀವು ಬಯಸಿದರೆ ಸರ್ಕಾರದ ಅನುಮತಿಗಾಗಿ ಕಾಯಬೇಕಾಗುತ್ತದೆ ಎಂದು " ಪೂನಾವಾಲಾ ಹೇಳಿದರು.