ಲಖಿಂಪುರ ಖೇರಿ, ಡಿ.14 (DaijiworldNews/PY): "ಉತ್ತರ ಪ್ರದೇಶದ ಲಖಿಂಪುರಖೇರಿಯಲ್ಲಿ 8 ಮಂದಿಯ ಸಾವಿಗೆ ಕಾರಣವಾಗಿದ್ದ ಹಿಂಸಾಚಾರ ಪೂರ್ವಯೋಚಿತ" ಎಂದು ವಿಶೇಷ ತನಿಖಾ ತಂಡ ಹೇಳಿದೆ.
"ಆರೋಪಿಗಳ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಿಸಬೇಕು" ಎಂದು ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ಗೆ ಎಸ್ಐಟಿ ಮನವಿ ಮಾಡಿದೆ.
"ಆರೋಪಿ ರಕ್ಷಣೆಗೆಂದೇ ಸಾಕ್ಷ್ಯ ಸಂಗ್ರಹಿಸಿದಂತಿದೆ. ಸದ್ಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279, 338 ಹಾಗೂ 340 ಎ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದರ ಬದಲಾಗಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಬೇಕು" ಎಂದು ಎಸ್ಐಟಿ ವಿನಂತಿ ಮಾಡಿದೆ.
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಅ.3ರಂದು ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಅಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಹಾಗೂ ಅವರ ಬೆಂಗಾವಲುಪಡೆ ವಾಹನಗಳು ಚಲಿಸಿದ್ದವು. ನಂತರ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಜನ ಸಾವನ್ನಪ್ಪಿದ್ದರು.