ಬೆಳಗಾವಿ, ಡಿ. 14 (DaijiworldNews/HR): ಬಿಜೆಪಿಗೆ ವಿಧಾನ ಪರಿಷತ್ನಲ್ಲಿ ಬಹುಮತ ಬಂದರೂ ಜೆಡಿಎಸ್ ಪಕ್ಷವನ್ನು ನಿರ್ಲಕ್ಷ್ಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು 25 ರಲ್ಲಿ 20ಕ್ಕೆ ಸ್ಪರ್ಧೆ ಮಾಡಿದ್ದೆವು. ಅದರಲ್ಲಿ 15 ಸ್ಥಾನ ಗೆಲ್ಲವ ನಿರೀಕ್ಷೆಯಿತ್ತು. ಆದರೆ 12 ಜನ ಅಭ್ಯರ್ಥಿಗಳು ಗೆದ್ದಿದ್ದಾರೆ" ಎಂದರು.
ಇನ್ನು ಬೆಳಗಾವಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದ್ದು, ಹೆಚ್ಚಿನ ಸ್ಥಾನ ಗೆಲ್ಲಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.