ಬೆಂಗಳೂರು, ಡಿ. 14 (DaijiworldNews/HR): ರಾಜ್ಯದಲ್ಲಿ ಮಂಗಳವಾರ 263 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದಲ್ಲಿ 263 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 30,00,934 ಕ್ಕೆ ಏರಿಕೆಯಾಗಿದ್ದು, ಇಂದು 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇನ್ನು ರಾಜ್ಯಾದ್ಯಂತ ಒಟ್ಟು 7,165 ಸಕ್ರಿಯ ಪ್ರಕರಣಗಳಿದ್ದು, 327 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ಕೋಲಾರ, ರಾಮನಗರ, ವಿಜಯಪುರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.