ಹಾವೇರಿ, ಡಿ.15 (DaijiworldNews/HR): ಹಾವೇರಿ ತಾಲ್ಲೂಕಿನ ಆಲದಕಟ್ಟಿಯಲ್ಲಿ ರೈತ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಆಲದಕಟ್ಟೆ ಗ್ರಾಮದ ರೈತ ಶಂಕ್ರಪ್ಪ ಕೊಡೆಪ್ಪ ಅಗಡಿ ತಮ್ಮ ಹೊಲದಲ್ಲಿ ನೇಣಿಗೆ ಶರಣಾಗಿದ್ದಾರೆ.
ಇನ್ನು ಶಂಕ್ರಪ್ಪ ಅವರ ಪತ್ನಿ ವಾಣಿಶ್ರೀ ಮತ್ತು ಮಗಳು ಕೀರ್ತಿ ವಿಷ ಸೇವಿಸಿದ್ದು, ವಾಣಿಶ್ರೀ ಮೃತಪಟ್ಟಿದ್ದಾರೆ. ಮಗಳು ಕೀರ್ತಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕರ್ನಾಕದಲ್ಲಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821