ಪಣಜಿ, ಡಿ.15 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ವೇಳೆ ಮಾತ್ರ ಪವಿತ್ರ ಗಂಗಾ ನದಿಯನ್ನು ನೆನಪಿಸಿಕೊಳ್ಳುತ್ತಾರೆ. ಅವರು ವೋಟಿಗಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಪ್ರಧಾನಿ ಮೋದಿಯವರು ಮತಗಳನ್ನು ಪಡೆಯಲು ಏನು ಬೇಕಾದರೂ ಮಾಡಲು ಸಿದ್ದರಿದ್ದಾರೆ. ಉತ್ತರಾಖಂಡದಲ್ಲಿ ಧ್ಯಾನ ಮಾಡಿದ್ದರು. ಈಗ ಗಂಗಾನದಿಯಲ್ಲಿ ಸ್ನಾನ ಮಾಡಿದ್ದಾರೆ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ವರ್ಷಪೂರ್ತಿ ನೀವು ಎಲ್ಲಿದ್ದಿರಿ? ಎಂದು ಪ್ರಶ್ನಿಸಿದ್ದಾರೆ.
ಇನ್ನು "ಗಂಗಾಜಲವನ್ನು ನಾವು ಪವಿತ್ರ ಎಂದು ನಂಬುತ್ತೇವೆ. ಆದರೆ ಬಿಜೆಪಿಯವರು ಕೊರೊನಾದಿಂದ ಮೃತಪಟ್ಟವರ ಮೃತದೇಹಗಳನ್ನು ಗಂಗಾ ನದಿಗೆ ಎಸೆದಿದ್ದಾರೆ" ಎಂದು ಆರೋಪಿಸಿದ್ದಾರೆ.
ನಾವು ಚುನಾವಣೆ ಸಂದರ್ಭದಲ್ಲಿ ಮಾತ್ರ ನಾವು ಗಂಗಾನದಿ ಪೂಜೆ ಮಾಡುವುದಿಲ್ಲ. ಆದರೆ ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಗೆ ಹೋಗಿರುವ ಮೋದಿ, ಕೇವಲ ಮತ ಪಡೆಯಲು ಮಾತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.