ನವದೆಹಲಿ, ಡಿ 15 (DaijiworldNews/MS): ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಶೀಘ್ರ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.ಇಡೀ ದೇಶ ನಿಮ್ಮೊಂದಿಗೆ ನಿಂತಿದೆ' ಎಂದು ಹೇಳಿದ್ದಾರೆ.
ತಮಿಳುನಾಡಿನ ಸೂಲೂರು ಎಂಬಲ್ಲಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು. ಅರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಸದ್ಯ ಜೀವ ರಕ್ಷಕ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.