ಬೆಂಗಳೂರು, ಡಿ 15 (DaijiworldNews/MS): ಭಾರತೀಯರ ತಮಿಳುನಾಡಿನ ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕಿ ಉಳಿದಿದ್ದ ಏಕೈಕ ಯೋಧ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಡಿ. 15 ರ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಭಾರತೀಯ ವಾಯುಪಡೆ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ವರುಣ್ ಸಿಂಗ್ರ ಉಳಿವಿಗಾಗಿ ಭಾರತೀಯರು ಸಲ್ಲಿಸಿದ ಪ್ರಾರ್ಥನೆ ಫಲಿಸಲಿಲ್ಲ.
ತಮಿಳುನಾಡಿನ ಸೂಲೂರು ಎಂಬಲ್ಲಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು. ಬದುಕಿಳಿದಿದ್ದ ಅರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ನುರಿತ ವೈದ್ಯರ ತಂಡ ವರುಣ್ ಸಿಂಗ್ರನ್ನು ಬದುಕಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸಿದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.