ಮುಂಬೈ, ಡಿ 15 (DaijiworldNews/MS): ಸ್ಟಾರ್ ನಟ ಶಾರುಖ್ ಖಾನ್ ಅವರ ಪುತ್ರ ಮತ್ತು ಡ್ರಗ್ಸ್ ಆನ್ ಕ್ರೂಸ್-ಶಿಪ್ ಪ್ರಕರಣದ ಆರೋಪಿ ಆರ್ಯನ್ ಖಾನ್ ಪ್ರತಿ ಶುಕ್ರವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಂಬೈ ಕಚೇರಿಗೆ ಹಾಜರಾಗಿ ಸಹಿ ಹಾಕುವ ಅವಶ್ಯಕತೆ ಇಲ್ಲವೆಂದು ಬಾಂಬೆ ಹೈಕೋರ್ಟ್ ಹೇಳಿದೆ.
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಅವರು ಪ್ರತಿ ಶುಕ್ರವಾರ ಎನ್ಸಿಬಿ ಕಚೇರಿಗೆ ತೆರಳಿ ಸಹಿ ಹಾಕಬೇಕಿತ್ತು. ಈ ಷರತ್ತಿನಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ಗೆ ಆರ್ಯನ್ ಖಾನ್ ಮನವಿ ಸಲ್ಲಿಸಿದ್ದರು.
ಜಾಮೀನು ಷರತ್ತನ್ನು ರದ್ದುಪಡಿಸಿದ ಬಾಂಬೆ ಹೈಕೋರ್ಟ್ನಿಂದ ಇಂದು ರಿಲೀಫ್ ಸಿಕ್ಕಿದೆ. ವಿಶೇಷ ತನಿಖಾ ತಂಡ ಅವರಿಗೆ ಸಮನ್ಸ್ ನೀಡಿದಾಗಲೆಲ್ಲಾ ಅವರು ದೆಹಲಿಗೆ ಹಾಜರಾಗಬೇಕು ಎಂದು ನ್ಯಾಯಾಲಯ ಹೇಳಿದೆ.
ಜಾಮೀನು ಷರತ್ತು 14 ರಲ್ಲಿ ಒಂದನ್ನು ತಿದ್ದುಪಡಿ ಮಾಡಬೇಕೆಂದು ಕೋರಿ ಆರ್ಯನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಪ್ರತಿ ಶುಕ್ರವಾರದ ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳಿಂದ ದೂಷಿಸಲ್ಪಡುತ್ತಾರೆ ಮತ್ತು ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಇರಬೇಕಾಗುತ್ತದೆ. ಪ್ರಕರಣದ ತನಿಖೆಯನ್ನು ದೆಹಲಿಯ ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿರುವುದರಿಂದ ಮುಂಬೈ ಕಚೇರಿಗೆ ಭೇಟಿ ನೀಡುವುದನ್ನು ಸಡಿಲಿಸಬಹುದು ಎಂದು ಅವರು ವಾದಿಸಿದ್ದರು
ಮುಂಬೈ ಕರಾವಳಿಯಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ ನಂತರ ಅಕ್ಟೋಬರ್ 3 ರಂದು ಆರ್ಯನ್ ಖಾನ್ ಅವರನ್ನು ಎನ್ಸಿಬಿ ಬಂಧಿಸಿತ್ತು. 22 ದಿನಗಳ ಬಳಿಕ ಅಕ್ಟೋಬರ್ 30ರಂದು ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಗಿತ್ತು.