ಲಕ್ನೋ , ಡಿ 15 (DaijiworldNews/MS): ಕುಡಿದ ಮತ್ತಿನಲ್ಲಿ ತಂದೆಯೇ ತನ್ನ 9 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಫತೇಪುರ್ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು ತಂದೆಯ ಜೊತೆಯಲ್ಲಿ ಮಲಗಿದ್ದ ಬಾಲಕಿಯ ಮೇಲೆ ಪಾಪಿ ತಂದೆ ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಬಾಲಕಿ ಅಳುತ್ತಿರುವ ಸದ್ದು ಕೇಳಿ ಸ್ಥಳಕ್ಕೆ ಧಾವಿಸಿದ ಆರೋಪಿಯ ಹಿರಿಯ ಸಹೋದರ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸಿಒ) ಖಗಾ, ಗಯಾದತ್ ಮಿಶ್ರಾ ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯ ತಾಯಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು.