ಬೆಳಗಾವಿ, ಡಿ.15 (DaijiworldNews/HR): ಕರಾವಳಿ ಜಿಲ್ಲೆಯಲ್ಲಿ ಕೋಮು ಸೌಹಾರ್ದವನ್ನು ಕೆದಡುವ್ ಮತ್ತು ಸಮಾಜ ವಿರೋಧಿ ಶಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, "ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ ಪ್ರಯತ್ನ ನಡೆಸುತ್ತಿರುವ ಬಗ್ಗೆ ತಿಳಿದಿದ್ದು, ಅವುಗಳಿಗೆ ನಿಯಂತ್ರಣ ಹೇರುವ ಬಗ್ಗೆ ಗಂಭೀರ ಪ್ರಯತ್ನ ನಡೆದಿದೆ" ಎಂದರು.
ಇನ್ನು ಉಪ್ಪಿನಂಗಡಿ ಪಟ್ಟಣದಲ್ಲಿ ಪೊಲೀಸರ ಮೇಲೆಯೂ ಹಲ್ಲೆಯಾಗಿದ್ದು, ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಂಡು, ದೇಶ ವಿರೋಧಿ ಸಂದೇಶಗಳನ್ನು ಹರಿಬಿಡಲಾಗುತ್ತಿದೆ" ಎಂದಿದ್ದಾರೆ.