ಬೆಳಗಾವಿ, ಡಿ.15 (DaijiworldNews/SM): ಚಳಿಗಾಲದ ಅಧಿವೇಶನದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೆ ಸಿದ್ದ ಎಂದು ಸರಕಾರ ಹೇಳಿಕೊಂಡಿದ್ದು, ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿ ಸರಾಕರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಲಿದೆ. ಎರಡೂ ಸದನಗಳಲ್ಲೂ ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಜೈನ, ಬೌದ್ಧ, ಕ್ರೈಸ್ತ, ಸಿಖ್ ಹೀಗೆ ಹಲವಾರು ಧರ್ಮಗಳಿವೆ. ಯಾವುದೇ ಒಂದು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡು ವಿಧೇಯಕ ತರುವುದು ಸೂಕ್ತವಲ್ಲ. ಕಾಂಗ್ರೆಸ್ ಈ ವಿಧೇಯಕವನ್ನು ಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.