ಬೆಂಗಳೂರು, ಡಿ.15 (DaijiworldNews/SM): ಕರಾವಳಿಯಲ್ಲಿ ಪ್ರಸ್ತುತ ಅನಗತ್ಯ ಘರ್ಷಣೆಗಳು ನಡೆಯುತ್ತಿದ್ದು ಇದರ ನಿಯಂತ್ರಣಕ್ಕೆ ಸರಕಾರ ಮುಂದಾಗಬೇಕಿದೆ ಎಂದು ಮಾಜಿ ಸಚಿವ ಶಾಸಕ ಯು.ಟಿ. ಖಾದರ್ ಸದನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಕರವಾಳಿಗರು ಭಯಪಡುವ ಅಗತ್ಯವಿಲ್ಲ. ಪೊಲೀಸ್ ಇಲಾಖೆಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದಿದ್ದಾರೆ.
ಪ್ರಶ್ನೇತ್ತರ ಅವಧಿಯಲ್ಲಿ ಶಾಸಕ ಖಾದರ್ ಅವರು ಕರಾವಳಿಯ ಸಮಸ್ಯೆಗಳನ್ನು ಸದನದ ಗಮನಕ್ಕೆ ತಂದರು. ಅದರಲ್ಲೂ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯ ಬಗ್ಗೆ ಪ್ರಸ್ತಾಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು, ಈ ಬಗ್ಗೆ ನಾನು ವರದಿ ತರಿಸಿಕೊಂಡಿದ್ದೇನೆ. ಕರಾವಳಿಯಲ್ಲಿ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಪೊಲೀಸರನ್ನು ಸರಕಾರ ನಿಯಂತ್ರಿಸಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.