ಜಮ್ಮು, ಡಿ.16 (Daijiworld/PY): ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಎನ್ಕೌಂಟರ್ಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ರೆಡ್ವಾನಿ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿಸ ಶೋಧ ಕಾರ್ಯಾಚರಣೆಯ ಸಂದರ್ಭ ಉಗ್ರರು ಗುಂಡು ಹಾರಿದ್ದಾರೆ. ಗುರುವಾರ ಮುಂಜಾನೆಯವರೆಗೂ ಮುಂದುವರಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಪೊಲೀಸ್ ವಕ್ತಾರರು ಹೇಳಿದ್ದಾರೆ.
ಹತ್ಯೆಗೀಡಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಲಾಗುತ್ತಿದೆ ಎಂದಿದ್ದಾರೆ.