ಬೆಂಗಳೂರು, ಡಿ.16 (DaijiworldNews/SM): ರಾಜ್ಯದಲ್ಲಿ ಮತ್ತೆ ಐವರಲ್ಲಿ ಓಮೈಕ್ರಾನ್ ಸೋಂಕು ಇರುವುದು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 8ಕ್ಕೆ ತಲುಪಿದೆ.
ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಾಜ್ಯಕ್ಕೆ ಬ್ರಿಟನ್ ನಿಂದ ಆಗಮಿಸಿದ 19ರ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. 52 ವರ್ಷದ ವ್ಯಕ್ತಿ ನೈಜೀರಿಯಾದಿಂದ ಬಂದಿದ್ದು, ಅವರಲ್ಲಿ ಸೋಂಕು ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಆಫ್ರಿಕಾದಿಂದ ಬಂದಿರುವ 33 ವರ್ಷದ ಯುವಕನಲ್ಲಿ ಪಾಸಿಟಿವ್ ದೃಢಪಟ್ಟಿದೆ. ದೆಹಲಿಯಿಂದ ಆಗಮಿಸಿರುವ 36 ವರ್ಷದ ವ್ಯಕ್ತಿ ಮತ್ತು 70 ವರ್ಷದ ವೃದ್ಧೆಯಲ್ಲಿ ಓಮೈಕ್ರಾನ್ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ ಈ ಹಿಂದೆ ಮೂವರಲ್ಲಿ ಓಮಿಕ್ರಾನ್ ಪತ್ತೆಯಾಗಿತ್ತು.