ಬೆಳಗಾವಿ, ಡಿ.16 (DaijiworldNews/SM): ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 53,700 ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಪ್ರಾಥಮಿಕ ಮತ್ತೆ ಪ್ರೌಢ ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ. ಇವುಗಳಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರ ಹುದ್ದೆಗಳು ಒಳಗೊಂಡಿವೆ.
ಸದನದಲ್ಲಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಾಥಮಿಕ ಶಾಲೆಗಳಲ್ಲಿ 41,869, ಪ್ರೌಢಶಾಲೆಗಳಲ್ಲಿ 8,292 ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 3,292 ಹುದ್ದೆಗಳು ಖಾಲಿ ಇವೆ ಎಂದಿದ್ದಾರೆ.
ಇನ್ನು ಶಿಕ್ಷಕರು ಹಾಗೂ ಸಿಬ್ಬಂದಿಗಳ ಕೊರತೆ ನೀಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಲ್ಲಿ ಕ್ರಮವಾಗಿ 18,000 ಮತ್ತು 5,078 ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.