ಮೈಸೂರು, ಡಿ. 17 (DaijiworldNews/HR): ತನ್ನ 2 ವರ್ಷದ ಮಗುವನ್ನು ಸಾಯಿಸಿ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದ ಅನ್ನಪೂರ್ಣ (22) ಎಬವರು ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ 2 ವರ್ಷದ ಮಗ ಮೋಕ್ಷೀತ್ ನನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಮಹದೇವ ಪ್ರಸಾದ್ ಎಂಬಾತನನ್ನು ಅನ್ನಪೂರ್ಣ 2 ವರ್ಷಗಳ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ.
ಈ ಬಗ್ಗೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.