ಬೆಂಗಳೂರು, ಡಿ. 17 (DaijiworldNews/HR): ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು ಎಂದು ವಿಧಾನಸಭೆ ಅಧಿವೇಶನದಲ್ಲಿ ತಾವು ನೀಡಿದ್ದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಇಂದು ವಿಧಾನಸಭೆ ಕಲಾಪದ ಆರಂಭದಲ್ಲೇ ಕ್ಷಮೆಯಾಚಿಸಿದ್ದಾರೆ.
ಲಘುವಾಗಿ ವರ್ತಿಸುವ ದುರುದ್ದೇಶ ನನಗೆ ಇರಲಿಲ್ಲ. ನನ್ನ ಹೇಳಿಕೆಗೆ ಭೇಷರತ್ತಾಗಿ ಕ್ಷಮೆಯಾಚಿಸುತ್ತೇನೆ ಎಂದು ವಿಧಾನಸಭೆ ಕಲಾಪದ ಆರಂಭದಲ್ಲೇ ರಮೇಶ್ ಕುಮಾರ್ ಕ್ಷಮೆ ಯಾಚನೆ ಮಾಡಿದ್ದಾರೆ.
ಇದೇ ವಿಚಾರವಾಗಿ ಗುರುವಾರ ರಾತ್ರಿ ಟ್ವೀಟ್ ಮಾಡಿರುವ ರಮೇಶ್ ಕುಮಾರ್ ಅವರು "ತಮ್ಮ ಹೇಳಿಕೆಗೆ ಎಲ್ಲರಲ್ಲಿಯೂ ಕ್ಷಮೆಯಾಚಿಸುತ್ತೇನೆ. ಮುಂದೆ ನಾನು ನನ್ನ ಮಾತುಗಳಲ್ಲಿ ಎಚ್ಚರ ವಹಿಸುತ್ತೇನೆ" ಎಂದು ಬರೆದುಕೊಂಡಿದ್ದರು. ಆದರೆ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕರ ಸದನದಲ್ಲಿಯೇ ರಮೇಶ್ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದ್ದರು.
ಅದರಂತೆಯೇ ಇಂದು ವಿಧಾನಸಭೆ ಕಲಾಪದ ಆರಂಭದಲ್ಲೇ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚನೆ ಮಾಡಿದ್ದಾರೆ.