ಭೋಪಾಲ್, ಡಿ. 17 (DaijiworldNews/HR): ತಮಿಳುನಾಡಿನ ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗಳಿಂದ ಸಾವನ್ನಪ್ಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಅಂತ್ಯಸಂಸ್ಕಾರ ಮಾಡಲಾಯಿತು.
ಬುಧವಾರ ಸಾವನ್ನಪ್ಪಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಶುಕ್ರವಾರ ಭೋಪಾಲ್ನ ಬೈರಾಗರ್ ಸ್ಮಶಾನದಲ್ಲಿ ವಾಯುಪಡೆಯ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಿದ್ದು, ಈ ವೇಳೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು.
ತಮಿಳುನಾಡಿನ ಸೂಲೂರು ಎಂಬಲ್ಲಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು. ಬದುಕಿಳಿದಿದ್ದ ಅರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ನುರಿತ ವೈದ್ಯರ ತಂಡ ವರುಣ್ ಸಿಂಗ್ರನ್ನು ಬದುಕಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸಿದರೂ ಚಿಕಿತ್ಸೆ ಫಲಿಸದೆ ಡಿ. 15 ರಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.