ದಾವಣಗೆರೆ, ಡಿ. 17 (DaijiworldNews/HR): ಮೂರಾರ್ಜಿ ವಸತಿ ಶಾಲೆಯಲ್ಲಿ ಬೆಳಿಗ್ಗೆ ತಿಂಡಿ, ಊಟ ಸೇವಿಸಿದ 95 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಬೆಳಿಗ್ಗೆ ಚಿತ್ರಾನ್ನ, ಮಧ್ಯಾಹ್ನ ಊಟ ಮಾಡಿದಂತ 95ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡು ವಾಂತಿ, ಬೇಧಿ ಕಾಣಿಸಿಕೊಂಡಿದ್ದು, ಅವರನ್ನು ತಕ್ಷಣ ಜಗಳೂರು ತಾಲೂಕು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಇನ್ನು 45 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿಯೇ ಚಿಕಿತ್ಸೆ ಕೊಡಿಸಲಾಗಿದ್ದು, ಮಿಕ್ಕ ವಿದ್ಯಾರ್ಥಿಗಳನ್ನು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಟಿಹೆಚ್ಓ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.