ಕೋಲಾರ, ಡಿ. 17 (DaijiworldNews/HR): ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆರ್. ಎಲ್. ಜಾಲಪ್ಪ ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ವಿಧಿವಶರಾಗಿದ್ದಾರೆ.
ಪಾರ್ಶುವಾಯುವಿಗೆ ತುತ್ತಾಗಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಕೋಲಾರದ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್. ಎಲ್. ಜಾಲಪ್ಪ ಇಂದು ಕೊನೆಯುಸಿರೆಳೆದಿದ್ದಾರೆ.
ಚಿಕ್ಕಬಳ್ಳಾಪುರ ಸಂಸದರಾಗಿದ್ದ ಆರ್. ಎಲ್. ಜಾಲಪ್ಪ 4 ಬಾರಿ ಗೆಲುವು ಸಾಧಿಸಿದ್ದು, ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದರು.
ಇನ್ನು ಆರ್. ಎಲ್. ಜಾಲಪ್ಪ ಅವರ ನಿಧನಕ್ಕೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಖ್ಯಮಂತ್ರಿಗಳ ಸಂತಾಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.