ನವದೆಹಲಿ, ಡಿ.17 (DaijiworldNews/SM): ದೇಶದಲ್ಲಿ ಮತ್ತೆ ಓಮೈಕ್ರಾನ್ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಇಲ್ಲಿಯ ತನಕ ದೇಶದ ೧೧ ರಾಜ್ಯಗಳಲ್ಲಿ ಸೋಂಕು ಪತ್ತೆಯಾಗಿದೆ ಎಂಬುವುದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ.
ಮಹಾರಾಷ್ಟ್ರದಲ್ಲಿ 32 ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ 22 ಪ್ರಕರಣಗಳು ಪತ್ತೆಯಾಗಿವೆ. ರಾಜಸ್ಥಾನದಲ್ಲಿ 17, ಕರ್ನಾಟಕ ಮತ್ತು ತೆಲಂಗಾಣದಲ್ಲಿ 8, ಗುಜರಾತ್ ಮತ್ತು ಕೇರಳದಲ್ಲಿ ತಲಾ 5, ಆಂಧ್ರ ಪ್ರದೇಶ, ಚಂಡೀಘಡ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 1 ಪ್ರಕರಣ ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ವರ್ತಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಬ್ಬ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಎಚ್ಚರಿಕಾ ಕ್ರಮ ಅನುಸರಿಸುವುದು ಉತ್ತಮ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.