ಬೆಳಗಾವಿ, ಡಿ.18 (DaijiworldNews/HR): ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಗೊಳಿಸಿ, ಸರ್ಕಾರಿ ಬಸ್, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದ 27 ಎಂಇಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಎಂಇಎಸ್ ಪುಂಡರು ಬೆಳಗಾವಿಯಲ್ಲಿ ಧ್ವಂಸಗೊಳಿಸಿ, ವಿರೂಪಗೊಳಿಸಿದಂತ ಘಟನೆ ಶುಕ್ರವಾರ ತಡರಾತ್ರಿ ನಡೆಯಿತ್ತು. ಇದರಿಂದಾಗಿ ರಾಜಕೀಯ ನಾಯಕರು ಸೇರಿದಂತೆ ಸಿಎಂ ಕೂಡ ಈ ಘಟನೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತ ಎಚ್ಚರಿಕೆ ನೀಡಿದ್ದರು.
ಇನ್ನು 4 ಕಡೆಗಳಲ್ಲಿ ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 27 ಜನರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ಇನ್ನೂ ನಗರದಲ್ಲಿ ಬೆಳಿಗ್ಗೆಯಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಸಿಪಿ ವಿಕ್ರಂ ಆಮ್ಟೆ ತಿಳಿಸಿದ್ದಾರೆ.
ಬಂಧಿಸಲಾಗಿದ್ದ 27 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ ನ್ಯಾಯಾಧೀಶರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.