ಮೈಸೂರು, ಡಿ.18 (Daijiworld/PY): ಬೆಳಗಾವಿಯಲ್ಲಿ ನಡೆದ ಘಟನೆಯನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಖಂಡಿಸಿದ್ದು, "ಹದ್ದು ಮೀರಿದ ವರ್ತನೆಯನ್ನು ಸಹಿಸಲು ಆಗುವುದಿಲ್ಲ" ಎಂದಿದ್ದಾರೆ.
ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ನಡೆದ ಪುಂಡಾಟ ಖಂಡನೀಯ. ಈ ವರ್ತನೆ ಅಕ್ಷಮ್ಯ ಅಪರಾಧ. ಇತಿಹಾಸ ಪುರುಷರ ಪ್ರತಿಮೆಗಳಿಗೆ ಧಕ್ಕೆ ಉಂಟುಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅಧಿವೇಶನದಲ್ಲಿ ಚರ್ಚಿಸಲಾಗುವುದು. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ" ಎಂದು ಹೇಳಿದ್ದಾರೆ.
"ಈ ರೀತಿಯಾದ ಘಟನೆ ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಪುಂಡಾಟಿಕೆ ನಡೆಸಿದವರು ಯಾರೇ ಇರಲಿ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.