ಬೆಂಗಳೂರು, ಡಿ.18 (DaijiworldNews/HR): ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಒಮಿಕ್ರಾನ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, "ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಯಲ್ಲಿನ ಕ್ಲಸ್ಟರ್ 1ರಲ್ಲಿ 14 ಕೊರೋನಾ ಪಾಸಿಟಿವ್ ಪ್ರಕರಣಗಳಲ್ಲಿ ನಾಲ್ವರಿಗೆ ಓಮಿಕ್ರಾನ್ ದೃಢಪಟ್ಟಿದೆ. ಮತ್ತೊಂದು ಶಿಕ್ಷಣ ಸಂಸ್ಥೆಯ ಕ್ಲಸ್ಟರ್ 2ರಲ್ಲಿನ 19 ಕೋವಿಡ್ ಸೋಂಕಿತರಲ್ಲಿ ಒಬ್ಬರಿಗೆ ರೂಪಾಂತರಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ" ಎಂದು ತಿಳಿಸಿದ್ದಾರೆ.
ಇನ್ನು ಓಮಿಕ್ರಾನ್ ರೂಪಾಂತರದ ಪ್ರಕರಣಗಳು ಭಾರತದಲ್ಲಿ 100 ರ ಗಡಿ ದಾಟಿದೆ. ಇದು ದೇಶಾದ್ಯಂತ 11 ರಾಜ್ಯಗಳ ಮೇಲೆ ಪರಿಣಾಮ ಬೀರುತ್ತಿದೆ.