ಬೆಂಗಳೂರು, ಡಿ.18 (DaijiworldNews/HR): ರಾಜ್ಯದಲ್ಲಿ ಶನಿವಾರ 335 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,02,127 ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 5 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಒಟ್ಟು 38,287 ಸೋಂಕಿತರು ಸಾವನ್ನಪ್ಪಿದ್ದಾರೆ.
ಇಂದು 286 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 29,56,691 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7120 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.28 ರಷ್ಟು ಇದೆ.
ಇನ್ನು ಬೆಂಗಳೂರಿನಲ್ಲಿ ಇಂದು ಹೊಸದಾಗಿ 225 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ.