ಶ್ರೀನಗರ, ಡಿ.19 (Daijiworld/PY): ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಯೋಧರ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ಮತ್ತೋರ್ವ ಉಗ್ರನನ್ನು ಸದೆಬಡೆದಿದ್ದಾರೆ.
ಭಾನುವಾರ ಶ್ರೀನಗರದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದ್ದು, ಈ ಸಂದರ್ಭ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶ್ರೀನಗರದ ಹರ್ವಾನ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳು ಘಟನಾ ಪ್ರದೇಶವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿಸಿದೆ. ಅಲ್ಲದೇ, ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.