ಕೊಚ್ಚಿ, ಡಿ.19 (DaijiworldNews/HR): ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಹತ್ಯೆಯಾದ ಬೆನ್ನಲ್ಲೇ ಇದೀಗ ಬೆಳ್ಳಂಬೆಳಗ್ಗೆ ಕೇರಳದ ಅಲಪ್ಪುಳದಲ್ಲಿ ಬಿಜೆಪಿಯ ಮುಖಂಡನ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಬೆಳಗ್ಗೆ ಬಿಜೆಪಿಯ ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ ಮನೆಗೆ ನುಗ್ಗಿದ ಅಪರಿಚಿತರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಇನ್ನು ಇತ್ತೀಚೆಗಷ್ಟೆ ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರನ್ನು ಕೇರಳದ ಕೊಚ್ಚಿಯಲ್ಲಿ ಹತ್ಯೆ ಮಾಡಿದ್ದು, ಇದರ ಬೆನ್ನಲ್ಲೇ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ ಅವರ ಹತ್ಯೆಯಾಗಿದೆ.
2016ರ ವಿಧಾನಸಭಾ ಚುನಾವಣೆಯಲ್ಲಿ ರಂಜಿತ್ ಶ್ರೀನಿವಾಸ್ ಅಲಪ್ಪುಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು.