ಬೆಂಗಳೂರು, ಡಿ.19 (DaijiworldNews/HR): ಬೆಂಗಳೂರಿನ ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಕೆಲ ದಿನಗಳ ಹಿಂದೆ ಬೆಂಗಳೂರಿನ ಸದಾಶಿವನಗರದಲ್ಲಿ ಶಿವಾಜಿಯ ಪ್ರತಿಮೆಗೆ ಮಸಿ ಬಳಿಯಲಾಗಿದ್ದು, ಪ್ರಕರಣ ಸಂಬಂಧ ಕರ್ನಾಟಕ ರಣಧೀರ ಪಡೆಯ ಚೇತನ್ ಗೌಡ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಕನ್ನಡ ಬಾವುಟಕ್ಕೆ ಎಂಇಇಎಸ್ ಕಾರ್ಯಕರ್ತರು ಬೆಂಕಿ ಹಚ್ಚಿದಕ್ಕೆ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದಾಗಿ ಹೇಳಿದ್ದಾರೆ ಎನ್ನಲಾಗಿದ್ದು, ಸದ್ಯ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.