ಹುಬ್ಬಳ್ಳಿ, ಡಿ.19 (Daijiworld/PY): "ದೇಶ ಭಕ್ತರ ಹೆಸರಿನಲ್ಲಿ ಕಾನೂನು ವ್ಯವಸ್ಥೆ ಹಾಳುಗೆಡವುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರತಿಯೊಬ್ಬರು ಸಹ ದೇಶಭಕ್ತರಿಗೆ ಗೌರವ ನೀಡಬೇಕು. ಅದಕ್ಕಾಗಿ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದೇವೆ, ಬೇರೆ ಬೇರೆ ವಿಚಾರಗಳನ್ನು ತಂದು ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದು ಸೂಕ್ತವಲ್ಲ" ಎಂದು ಹೇಳಿದ್ದಾರೆ.
"ಯಾವುದೇ ವಿಚಾರ ಹೇಳುವುದಿದ್ದರೂ ಶಾಂತವಾಗಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾನೂನು ವ್ಯವಸ್ಥೆಗೆ ಧಕ್ಕೆ ಉಂಟು ಮಾಡುವುದಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ. ಯಾರೇ ಹೋರಾಟ ಮಾಡಿದರೂ ಸಹ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ನೋಡಿಕೊಳ್ಳಬೇಕು" ಎಂದಿದ್ದಾರೆ.