ನವದೆಹಲಿ, ಡಿ.19 (DaijiworldNews/HR): ದೇಶದ ನಾಲ್ಕು ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣ ಹೆಚ್ಚಾಗಿದ್ದು ಶನಿವಾರ ಓಮಿಕ್ರಾನ್ ಸೋಂಕಿತರ ಸಂಖ್ಯೆ 143 ಕ್ಕೆ ತಲುಪಿದೆ.
ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳ ಎಂಬ ನಾಲ್ಕು ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗಿದ್ದು, ಹೊಸ ತಳಿಯು ಡೆಲ್ಟಾ ರೂಪಾಂತರಕ್ಕಿಂತ ವೇಗವಾಗಿ ಹರಡುತ್ತಿದೆ ಎಂದು ತೋರುತ್ತಿದೆ ಎಂದು ಡಬ್ಲ್ಯುಎಚ್ಒ ಹೇಳಿದ್ದು, ಆತಂಕ ಹೆಚ್ಚಿದೆ.
ಇನ್ನು ಇತ್ತೀಚೆಗಷ್ಟೇ ಐವರಿಗೆ ರೂಪಾಂತರಿ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟು, ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿತ್ತು. ಶನಿವಾರ ಮತ್ತೆ ದ.ಕ ಜಿಲ್ಲೆಯಲ್ಲಿ ಐವರಿಗೆ ಓಮಿಕ್ರಾನ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ದಿನೇ ದಿನೇ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಮೊನ್ನೆ ಇದುವರೆಗೆ 13 ಜನರಿಗೆ ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ.