ಹಾವೇರಿ, ಡಿ.19 (Daijiworld/PY): "ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾಗೂ ಶಿವಾಜಿ ಮೂರ್ತಿ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 30 ಜನರನ್ನು ಬಂಧಿಸಲಾಗಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ.
ಹಾವೇರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಯಾವುದೇ ಪ್ರತಿಮೆಗಳನ್ನು ವಿರೂಪಗೊಳಿಸುವುದು ತಪ್ಪು. ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮೂರ್ತಿಯನ್ನು ಭಗ್ನಗೊಳಿಸಿದವರನ್ನು ಬಂಧಿಸಲಾಗಿದೆ" ಎಂದಿದ್ದಾರೆ.
"ಮಹಾರಾಷ್ಟ್ರ ಸಿಎಂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಬಗ್ಗೆ ನನಗೆ ಗೊತ್ತಿಲ್ಲ. ಈ ಕುರಿತು ತಿಳಿದುಕೊಂಡು ಮಾತನಾಡುವೆ" ಎಂದು ತಿಳಿಸಿದ್ದಾರೆ.
"ರಾಜ್ಯದ ಮಂದಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕು. ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಸಬಾರದು. ಮೂರ್ತಿಗಳು ಭಗ್ನಗೊಳಿಸಿದ ಬಂಧಿತರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ" ಎಂದಿದ್ದಾರೆ.