ಕೋಲ್ಕತ್ತಾ, ಡಿ.19 (DaijiworldNews/HR): ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಭಾನುವಾರ ನಡೆಯುತ್ತಿದ್ದು, ಈ ವೇಳೆ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿಡು ಮೂವರು ಮತದಾರರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, "ಮತದಾನದ ವೇಳೆ ವಾರ್ಡ್ ಸಂಖ್ಯೆ 36ರ ಟಾಕಿ ಶಾಲೆಯ ಮುಂಭಾಗದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಅದರಲ್ಲಿ ಮೂವರು ಗಾಯಗೊಂಡಿದ್ದು, ಗಾಯಗೊಂಡವರಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ತಿಳಿಸಿದ್ದಾರೆ.
ಇನ್ನು ಎರಡು ಬಾಂಬ್ಗಳನ್ನು ಎಸೆದಿದ್ದು, ಅಪರಾಧಿಗಳನ್ನು ಗುರುತಿಸಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.