ರಾಜಸ್ತಾನ, ಡಿ.19 (Daijiworld/PY): "ಭಾನುವಾರ ರಾಜಸ್ತಾನದ ಜೈಸಲ್ಮೇರ್ ಜಿಲ್ಲೆಯ ಕಿಶನ್ಗಢ ಫೈರಿಂಗ್ ರೇಂಜ್ನಲ್ಲಿ ನಡೆದ ಮೋರ್ಟರ್ ಸ್ಪೋಟದಲ್ಲಿ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
"ಹುತಾತ್ಮ ಯೋಧನನ್ನು ಸಂದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ರಾಯಗಢದ ಆಸ್ಪತ್ರೆಗೆ ರವಾನಿಸಲಾಗಿದೆ" ಎಂದು ಪೊಲೀಸರು ಹೇಳಿದ್ದಾರೆ.
136 ನೇ ಬೆಟಾಲಿಯನ್ನ ಬಿಎಸ್ಎಫ್ ಯೋಧರು ತರಬೇತಿಯಲ್ಲಿ ಪಾಲ್ಗೊಳ್ಳಲು ಬಂದಿದ್ದಾಗ ಈ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿದ ಹಿರಿಯ ಬಿಎಸ್ಎಫ್ ಹಾಗೂ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.