ಉತ್ತರ ಪ್ರದೇಶ , ಡಿ.19 (DaijiworldNews/SM): ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಾಗಲೇ ಸಿದ್ಧತೆ ಆರಂಭಿಸಲಾಗಿದೆ.
ಬಹುತೇಕ ಎಲ್ಲಾ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿವೆ. ಈಗಾಗಲೇ ನಡೆಸಿರುವ ಸಮೀಕ್ಷೆಗಳ ಪ್ರಕಾರ ಮತ್ತೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಇನ್ನಿಲ್ಲತ ಸಿದ್ಧತೆಯಲ್ಲಿ ತೊಡಗಿಕೊಂಡಿವೆ.
ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಬೇಕೆನ್ನುವುದು ಪ್ರತಿಪಕ್ಷಗಳ ಲೆಕ್ಕಾಚಾರ. ಅದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಪ್ರತಿಪಕ್ಷಗಳು ಆರಂಭಿಸಿವೆ. ಈಗಾಗಲೇ ಬಿಜೆಪಿ ಪಕ್ಷ ಯುಪಿಯಲ್ಲಿ ರ್ಯಾಲಿ ಆರಂಭಿಸಿದ್ದು, ಪ್ರತಿಪಕ್ಷಗಳೂ ಕೂಡ ರ್ಯಾಲಿ ಪ್ರಾರಂಭಿಸಿವೆ.