ಗುಜರಾತ್ , ಡಿ 20 (DaijiworldNews/MS): ಪಾಕಿಸ್ತಾನದ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹ 400 ಕೋಟಿ ರೂ. ಮೌಲ್ಯದ 77 ಕೆಜಿ ಹೆರಾಯಿನ್ ಸಮೇತ ದೋಣಿಯಲ್ಲಿದ್ದ ಆರು ಮಂದಿಯನ್ನು ಭಾರತೀಯ ಜಲಪ್ರದೇಶ ಗುಜರಾತ್ ಕರಾವಳಿಯಲ್ಲಿ ಸೆರೆಹಿಡಿಯಲಾಗಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕ ಕಚೇರಿ ಸೋಮವಾರ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಗುಜರಾತ್ ಭಯೋತ್ಪಾದನಾ ನಿಗ್ರಹ ದಳದೊಂದಿಗೆ ಭಾರತೀಯ ಕೋಸ್ಟ್ ಗಾರ್ಡ್ (ICG) ಜಂಟಿ ಕಾರ್ಯಾಚರಣೆಯನ್ನು ನಡೆಸಿತು ಪಾಕಿಸ್ತಾನದ ಮೀನುಗಾರಿಕಾ ದೋಣಿ 'ಅಲ್ ಹುಸೇನಿ' ನಲ್ಲಿ ಸಾಗಿಸುತ್ತಿದ್ದ ಮಾದಕದ್ರವ್ಯ ಹಾಗೂ ಆರು ಮಂದಿಯನ್ನ ವಶಪಡಿಸಿಕೊಳ್ಳಲಾಗಿದೆ.
ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕ ಕಚೇರಿಯೂ ಈ ಕುರಿತು ಟ್ವಿಟ್ ಮಾಡಿದ್ದು " ಭಾರತೀಯ ಕರಾವಳಿ ಕಾವಲು ಪಡೆ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ, ಸುಮಾರು ₹ 400 ಕೋಟಿ ಮೌಲ್ಯದ 77 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ಮೀನುಗಾರಿಕಾ ದೋಣಿ 'ಅಲ್ ಹುಸೇನಿ' ಹಾಗೂ ಅದರ 6 ಸಿಬ್ಬಂದಿಯನ್ನು ಭಾರತೀಯ ಜಲಪ್ರದೇಶದಲ್ಲಿ ವಶಪಡಿಸಿಕೊಂಡಿದೆ" ಎಂದು ಹೇಳಿದೆ.