ರಾಮನಗರ, ಡಿ.20 (DaijiworldNews/HR): ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಚೆಲುಮೆ ಮಠದ ಸ್ವಾಮೀಜಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾಂದರ್ಭಿಕ ಚಿತ್ರ
ಸೋಲುರು ಗ್ರಾಮದ ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ (52) ಮೃತದೇಹ ಪತ್ತೆಯಾಗಿದೆ.
ಸ್ವಾಮೀಜಿ ಅವರ ಮೃತದೇಹ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.