ಮುಂಬೈ, ಡಿ.20 (DaijiworldNews/HR): ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಪನಾಮಾ ಪೇಪರ್ಸ್' ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಜಾರಿ ನಿರ್ದೇಶಾನಾಲಯ(ಇ.ಡಿ) ಸಂಸ್ಥೆಯು ನಟಿ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದೆ ಎಂದು ತಿಳಿದುಬಂದಿದೆ.
ಇನ್ನು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದ್ದು, 2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದು, ಈಗ ಮತ್ತೆ ಸಮನ್ಸ್ ನೀಡಿದ್ದು, 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.