ಬೆಳಗಾವಿ, ಡಿ.20 (DaijiworldNews/HR): ಯಾವುದೇ ಸಂಘಟನೆ ಪರ ನಾನು ಮಾತನಾಡೋದಿಲ್ಲ. ಆದರೆ ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನೈತಿಕ ಪೊಲೀಸ್ ಗಿರಿಗೆ ಅವಕಾಶ ಕೊಡಬೇಡಿ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ಕರ್ನಾಟಕ ರಾಜ್ಯದಲ್ಲಿಯೇ ಕಾನೂನು ಸುವ್ಯವಸ್ಥೆ ಹಾಳಾಗಿ ಹೋಗಿದೆ. ಕಿಡಿಗೇಡಿಗಳಿಂದ ಶಾಂತಿ ಕದಡುವಂತ ಕೆಲಸ ಮಾಡಲಾಗುತ್ತಿದ್ದು, ಇದಕ್ಕೆ ಸರ್ಕಾರ ಅವಕಾಶ ನೀಡಬಾರದು" ಎಂದರು.
ಇನ್ನು ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶ ಕೊಡಬೇಡಿ. ಪೊಲೀಸರು ರಾಜಕಾರಣ ಮಾಡುವುದನ್ನು ಬಿಟ್ಟು ಕೆಲಸ ಮಾಡಬೇಕು. ಒಂದು ವೇಳೆ ರಾಜಕಾರಣ ಮಾಡೋದಾದರೆ ಖಾಕಿ ಬಿಟ್ಟು ಕಾವಿ ಧರಿಸಲಿ" ಎಂದು ಹೇಳಿದ್ದಾರೆ.