ಬೆಳಗಾವಿ, ಡಿ.20 (DaijiworldNews/HR): ಮುಖ್ಯಮಂತ್ರಿ ಕುರ್ಚಿಯ ಕನಸನ್ನು ಯಾರೂ ಕಾಣುವುದು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಯ ಕನಸನ್ನು ಯಾರೂ ಕಾಣುವುದು ಬೇಡ. ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ" ಎಂದರು.
ಇನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುವುದಾಗಿ ನಮ್ಮ ನಾಯಕರು ಹೇಳಿದ್ದಾರೆ. ಕ್ಷೇತ್ರದ ಜನರು ಪ್ರೀತಿಯಿಂದ ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಭಾವನಾತ್ಮಕವಾಗಿ ಸಿಎಂ ಮಾತನಾಡಿದ್ದಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ" ಎಂದು ಹೇಳಿದ್ದಾರೆ.